ಧಾರವಾಡ: ಧಾರವಾಡ ತಹಶೀಲ್ದಾರ್ ಕಚೇರಿ ರಸ್ತೆಯಲ್ಲಿರುವ ಶ್ರೀಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಾಯಿರಾಜ್ ಬಳ್ಳಿಕಾರ ರಾಷ್ಟ್ರಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 17ರಿಂದ 19ರವರೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯಲಿರುವ ಕಾಶಿ ಚಾಲೆಂಜ್ ಕಪ್, ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಸಾಯಿರಾಜ್ ಪಾಲ್ಗೊಳ್ಳಲಿದ್ದಾರೆ. ಶ್ರೀಸಾಯಿ ಕಾಲೇಜಿನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವೀಣಾ ಬಿರಾದಾರ, ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ, ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ಸಿಬ್ಬಂದಿ ಸಾಯಿರಾಜ್ ಅವರನ್ನು ಅಭಿನಂದಿಸಿದ್ದಾರೆ.
Kshetra Samachara
14/12/2021 10:10 pm