ಕುಂದಗೋಳ: ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ಹಿಮ್ಮುಖವಾಗಿ ಖಾಲಿ ಟ್ರ್ಯಾಕ್ಟರ್ ಓಡಿಸುವ ಸ್ಪರ್ಧೆಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮೇಶ್ ಹೆಬಸೂರ ಚಾಲನೆ ನೀಡಿದರು. ಬಳಿಕ ಸ್ವತಃ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸಿ ಯುವಕರಿಗೆ ಪ್ರೋತ್ಸಾಹ ನೀಡಿದರು.
ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಆರಂಭಿಸಿದ ಅವರು ಪ್ರಶಸ್ತಿ ಅನಾವರಣಗೊಳಿಸಿದರು. ಕುಬಿಹಾಳ ಗ್ರಾಮದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕುಂದಗೋಳ ತಾಲೂಕು ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ರೈತರು ಆಗಮಿಸಿ ಭಾಗವಹಿಸಿದ್ದರು.
ಕುಬಿಹಾಳ ಗ್ರಾಮದ ಯುವಕ ಮಂಡಳದವರು ಆಯೋಜಿಸಿದ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸುವ ಸ್ಪರ್ಧೆಗೆ ಸರ್ವ ಗುರು ಹಿರಿಯರು ಬೆಂಬಲ ಸೂಚಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
Kshetra Samachara
09/03/2022 03:22 pm