ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕುಸ್ತಿ ಪಂದ್ಯಾವಳಿಯಲ್ಲಿ ಮೇಲುಗೈ ಸಾಧಿಸಿದ ಶಿಕ್ಷಕಿ

ಧಾರವಾಡ: ಚಂಡಿಗಡದಲ್ಲಿ ಇತ್ತೀಚೆಗೆ ಜರುಗಿದ ಸರ್ಕಾರಿ ನೌಕರರ ರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಶಿಕ್ಷಕಿ ಸರಸ್ವತಿ ಅವರು ಭಾಗವಹಿಸಿ, ಪ್ರಶಸ್ತಿ ಗಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ನವಲಗುಂದ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-04 ರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸರಸ್ವತಿ ಲಕ್ಷ್ಮಣ ಸುಣಗಾರ ಅವರು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬಹುಮಾನ ಗಳಿಸಿದ್ದರು.

ಇತ್ತೀಚೆಗೆ ಚಂಡಿಗಡದಲ್ಲಿ ಜರುಗಿದ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ 50 ಕೆ.ಜಿ ತೂಕದ ಕುಸ್ತಿ ವಿಭಾಗದಲ್ಲಿ ಆಡಿ ಪ್ರಶಸ್ತಿ ಗಳಿಸಿದ್ದಾರೆ. ನಿನ್ನೆ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ನೇತೃತ್ವದಲ್ಲಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Edited By : PublicNext Desk
Kshetra Samachara

Kshetra Samachara

31/03/2022 08:24 pm

Cinque Terre

5.67 K

Cinque Terre

0

ಸಂಬಂಧಿತ ಸುದ್ದಿ