ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮನಸೂರಿನಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

ಧಾರವಾಡ: ಧಾರವಾಡ ತಾಲೂಕಿನ ಮನಸೂರು ಗ್ರಾಮದ ಸಿದ್ದಪ್ಪಜ್ಜನ ಜಾತ್ರಾ ಮಹೋತ್ಸವದ ಅಂಗವಾಗಿ ಮನಸೂರ ಗೆಳೆಯರ ಬಳಗದ ವತಿಯಿಂದ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಏಪ್ರೀಲ್ 2 ರಂದು ಆರಂಭಗೊಳ್ಳಲಿವೆ.

ಸಂಜೆ 6.30 ಕ್ಕೆ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಸಕ್ಕರೆ ಸಚಿವ ಶಂಕರ ಪಾಟೀಲ ‌ಮುನೇನಕೊಪ್ಪ ಅವರು ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಎಂ ನಿಂಬಣ್ಣವರ, ಮಾಜಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸಲಿದ್ದಾರೆ. ಮನಸೂರ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು,‌ ಮನಗುಂಡಿ ಮಹಾಮನೆಯ ಬಸವಾನಂದ ಮಹಾಸ್ವಾಮೀಜಿ, ಮನಸೂರ ಗ್ರಾಮದ ಠಾಣಯ್ಯ ಹಿರೇಮಠ ಹಾಗೂ ಉಳವಯ್ಯ ಹಿರೇಮಠ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮನಸೂರ ಗ್ರಾಮದ ಗ್ರಾಪಂ ಅಧ್ಯಕ್ಷ ರಮೇಶ ಕುಂಬಾರ ಹಾಗೂ ಮಾಜಿ ಅಧ್ಯಕ್ಷ ಹಾಲಿ ಗ್ರಾಪಂ‌ ಸದಸ್ಯ ಕರೆಪ್ಪ ಬಾಳಪ್ಪ ಯತ್ತಿನಗುಡ್ಡ ಹಾಗೂ ಗೆಳೆಯರ ಬಳಗ ಪಂದ್ಯಾವಳಿ ಆಯೋಜನೆ ಮಾಡಿದೆ. 18 ವರ್ಷ ಮೇಲ್ಪಟ್ಟ 65 ಕೆಜಿ ಒಳಗಿನ ಯುವಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸುಮಾರು ಎರಡು ಮೂರು ದಿನಗಳ ಕಾಲ‌ ಹೊನಲು ಬೆಳಕಿನಲ್ಲಿ ಪಂದ್ಯಾವಳಿ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

01/04/2022 09:50 pm

Cinque Terre

4.63 K

Cinque Terre

0

ಸಂಬಂಧಿತ ಸುದ್ದಿ