ಧಾರವಾಡ: 2022ನೇ ಸಾಲಿನ ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಓಲಂಪಿಕ್ಸ್ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ಮಿನಿ ಓಲಂಪಿಕ್ಸ್ ಕ್ರೀಡೆಗಳಲ್ಲಿ ಧಾರವಾಡದ ಪ್ರತಿಭೆಗಳು ಅಮೋಘ ಸಾಧನೆ ಮಾಡಿದ್ದಾರೆ ಎಂದು ಬಾಲ ಮಾರುತಿ ಜಿಮ್ನಾಸ್ಟಿಕ್ ಸಂಸ್ಥೆಯ ಸದಸ್ಯರೂ ಆದ ಪಾಲಿಕೆಯ ಸದಸ್ಯ ಈರೇಶ ಅಂಚಟಗೇರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೇ. 17 ರಿಂದ 20 ರವರೆಗೆ ನಡೆದ ಜಿಮ್ನಾಸ್ಟಿಕ್ಸ್ ಕ್ರೀಡೆಯಲ್ಲಿ ಶ್ರೀ ಬಾಲ-ಮಾರುತಿ ಜಿಮ್ನಾಸ್ಟಿಕ್ ಸಂಸ್ಥೆಯ ಮಕ್ಕಳು ಭಾಗವಹಿಸಿ 9 ಚಿನ್ನ 6 ಬೆಳ್ಳಿ 23 ಕಂಚು ಒಟ್ಟು 38 ಪದಕಗಳನ್ನು ಪಡೆದು ರನ್ನರ್ಸ್ ಅಪ್ ಆಗಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದರು.
ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಂಸ್ಥೆಯ ಕ್ರೀಡಾಪಟುಗಳು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
Kshetra Samachara
23/05/2022 10:25 pm