ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಅಮೃತ

ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಶಾಸಕ ಅಮೃತ ದೇಸಾಯಿ ಅವರು ಸ್ವತಃ ಗುಂಡು ಎಸೆಯುವ ಮೂಲಕ ಮಕ್ಕಳನ್ನು ಹುರುದುಂಬಿಸಿದರಲ್ಲದೇ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ನೂತನವಾಗಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ನೂತನ ಕೊಠಡಿಯನ್ನು ಶಾಸಕರು ಉದ್ಘಾಟಿಸಿದರು.

ನಂತರ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು, ಸ್ವತಃ ಗುಂಡು ಎಸೆದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾ ಜ್ಯೋತಿ ಹಾಗೂ ಧ್ವಜಾರೋಹಣ ನೆರವೇರಿಸಿದ ಶಾಸಕರು, ಮಕ್ಕಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧೆ ಮಾಡುವುದು ಮುಖ್ಯ. ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶತಮಾನೋತ್ಸವ ಸಮಾರಂಭ ಮಾಡಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ತವನಪ್ಪ ಅಷ್ಟಗಿ, ಕಲ್ಲಪ್ಪ ಪುಡಕಲಕಟ್ಟಿ, ಬಿಇಓ ಉಮೇಶ ಬೊಮ್ಮಕ್ಕನವರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Somashekar
Kshetra Samachara

Kshetra Samachara

26/07/2022 03:00 pm

Cinque Terre

27.37 K

Cinque Terre

0

ಸಂಬಂಧಿತ ಸುದ್ದಿ