ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಗುಡ್ಡಗಾಡು ಓಟದ ಸ್ಪರ್ಧೆ

ಧಾರವಾಡ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಓಲಂಪಿಕ್ ಅಸೋಸಿಯೇಶನ್ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟು ದಿ. ಕಲ್ಲವ್ವ ಸಿಂದೋಗಿ ಸ್ಮರಣಾರ್ಥವಾಗಿ ಆ.13 ರಂದು ರಾಜ್ಯ ಮಟ್ಟದ 10 ಕಿ.ಮೀ. ಗುಡ್ಡಗಾಡು ಓಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಶಿವು ಹಿರೇಮಠ ತಿಳಿಸಿದರು.

ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಆರು ಸ್ಪರ್ಧಾಳುಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯಸ್ಸಿನ ಮಿತಿ ಇಲ್ಲ ಎಂದರು.

ಆ. 13 ರಂದು ಬೆಳಿಗ್ಗೆ 6 ಕ್ಕೆ ಸ್ಪರ್ಧಾಳುಗಳು ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರಿಡಾಂಗಣದಲ್ಲಿ ಹಾಜರಿರಬೇಕು. ಅಲ್ಲಿಯೇ ಸ್ಪರ್ಧಾಳುಗಳಿಗೆ ಓಟ ಸ್ಪರ್ಧೆ ಸ್ಥಳದ ಮಾಹಿತಿ ನೀಡಲಾಗುವುದು. ತಡವಾಗಿ ಬಂದವರಿಗೆ ಅವಕಾಶ ನೀಡಲಾಗುವುದಿಲ್ಲ. ನಂತರ ಬೆಳಿಗ್ಗೆ 10 ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಆಸಕ್ತರು ಮೊಬೈಲ್ 9740024123, 9448590704, 9448923124 ಅಥವಾ 9902675705ಕ್ಕೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

03/08/2022 10:53 pm

Cinque Terre

19.49 K

Cinque Terre

0

ಸಂಬಂಧಿತ ಸುದ್ದಿ