ಕಾರವಾರ (ಉತ್ತರ ಕನ್ನಡ): ಹಳ್ಳದಲ್ಲಿ ಸ್ನಾನಕ್ಕೆ ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ಗ್ರಾಮದಲ್ಲಿ ನಡೆದಿದೆ.
ಹಳೇ ಹುಬ್ಬಳ್ಳಿಯ ಟಿಪ್ಪು ನಗರದ ಶಾಬಾಜ್ ಮಹಮ್ಮದ್ ಮೃತ ಯುವಕ. ಸಂತೆಗುಳಿಯಲ್ಲಿ ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ತಂದೆ ಹಾಗೂ ಸ್ನೇಹಿತರ ಜೊತೆ ಈತನೂ ಕೆಲಸಕ್ಕೆಂದು ಬಂದಿದ್ದ. ಆದರೆ ಹಳ್ಳದಲ್ಲಿ ಸ್ನಾನಕ್ಕೆಂದು ಹೋದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/09/2022 10:43 am