ನವಲಗುಂದ: ತಾಲೂಕಿನ ಯಮನೂರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳದ ಬೆಳೆಯು ಸಂಪೂರ್ಣ ನಾಶವಾಗಿದ್ದು, ನಾಶವಾದ ಮೆಕ್ಕೆಜೋಳದ ಬೆಳೆಯನ್ನು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ವೀಕ್ಷಿಸಿದರು.
ಬೆಳೆ ಹಾನಿಯಾದ ರೈತರಿಗೆ ಪರಿಹಾರವನ್ನು ಶೀಘ್ರವಾಗಿ ದೊರಕಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ತಹಶೀಲ್ದಾರರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
23/11/2021 10:26 am