ನವಲಗುಂದ: ನವಲಗುಂದ ತಾಲ್ಲೂಕಿನ ತಡಹಾಳ ಗ್ರಾಮದ ಬಳಿಯ ಬೆಣ್ಣೆ ಹಳ್ಳದಲ್ಲಿ ಯುವಕನೋರ್ವ ಬಿದ್ದು ಸಾವನ್ನಪ್ಪಿದ್ದ ಹಿನ್ನೆಲೆ ಭಾನುವಾರ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಮೃತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಿದರು.
ಶುಕ್ರವಾರ ಮಧ್ಯಾಹ್ನ ಬೈಕ್ ಸ್ಕಿಡ್ ಆದ ಪರಿಣಾಮ ಸದಾನಂದ ಶಿವಣಪ್ಪ ಮಾದರ ಎಂಬಾತ ಬೈಕ್ ಸಮೇತ ಬೆಣ್ಣೆ ಹಳ್ಳದಲ್ಲಿ ಬಿದ್ದಿದ್ದ. ಎನ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕ ದಳದಿಂದ ಕಾರ್ಯಾಚರಣೆ ನಡೆಸಿದರೂ ಶವ ಸಿಕ್ಕಿರಲಿಲ್ಲ. ಸೆಪ್ಟೆಂಬರ್ 4 ಬೆಳಗಿನ ಜಾವ ಅವರ ಮೃತದೇಹ ಪತ್ತೆಯಾಗಿತ್ತು.
ಈ ಹಿನ್ನೆಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ನವಲಗುಂದ ತಹಶೀಲ್ದಾರ್ ಅನೀಲ ಬಡಿಗೇರ ಹಾಗೂ ಅಧಿಕಾರಿಗಳು ಮೃತನ ನಿವಾಸಕ್ಕೆ ತೆರಳಿ 5 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಿದರು.
Kshetra Samachara
04/09/2022 05:27 pm