ನವಲಗುಂದ: ತಾಲ್ಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ತಾಲೂಕಿನ ಕರ್ಲವಾಡ ಗ್ರಾಮದ ಬೀರಪ್ಪ ಜೋಗಿನ ಅವರ ಮನೆಯು ಸಂಪೂರ್ಣ ನೆಲಸಮವಾಗಿದ್ದು, ಸ್ಥಳಕ್ಕೆ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೇಟಿ ನೀಡಿ ವೀಕ್ಷಿಸಿದರು.
ಈ ವೇಳೆ ಹಾನಿಗೊಳಗಾದ ಮನೆಯ ಸದಸ್ಯರಿಗೆ ಧೈರ್ಯ ಹೇಳಿದ ಸಚಿವರು, ಸರಕಾರದಿಂದ ದೊರೆಯಬೇಕಾದ ಪರಿಹಾರವನ್ನು ತಕ್ಷಣವೇ ನೀಡಲು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ತಹಶೀಲ್ದಾರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
23/11/2021 10:24 am