ನವಲಗುಂದ: 'ಜಲಜೀವನ್ ಮಿಷನ್' ಯೋಜನೆಯಲ್ಲಿ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಅಂದಾಜು 96 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/10/2021 08:08 pm