ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಬ್ದುಲ್ ಕಲಾಂ ಜನ್ಮ ದಿನಕ್ಕೆ ಗಣ್ಯರಿಂದ ಗೌರವ ನಮನ

ನವದೆಹಲಿ : ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 89ನೇ ಜನ್ಮ ದಿನಾಚರಣೆಯ ಅಂಗವಾಗಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಈ ವೇಳೆ ನಾಯ್ಡು ಅವರು, 'ಕನಸುಗಳು ಆಲೋಚನೆಯಾಗಿ ಮಾರ್ಪಡುತ್ತವೆ, ಆಲೋಚನೆಗಳು ನಡೆಯಾಗಿ ಬದಲಾಗುತ್ತವೆ' ಎಂಬ ಕಲಾಂ ಅವರ ನುಡಿಯನ್ನು ನೆನಪಿಸಿಕೊಂಡಿದ್ದಾರೆ.

'ಕಲಾಂ ಅವರು ತಮ್ಮ ಸರಳತೆಯಿಂದ ಜನರ ಮನಸ್ಸು ಗೆದ್ದಿದ್ದರು. ಅವರು ಆಗಾದ ಜ್ಞಾನ ಹೊಂದಿದ್ದರು.

ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ.

ಅವರು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ' ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್ ಮಾಡಿದೆ.

'ಕಲಾಂ ಅವರು ರಾಷ್ಟ್ರಪತಿಯಾಗಿ, ವಿಜ್ಞಾನಿಯಾಗಿ ದೇಶಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಜೀವನ ಪಯಣ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಲಾಂ ಅವರ ಜೀವನದ ಕಿರು ತುಣುಕುಗಳನ್ನು ಅವರು ಟ್ಯಾಗ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

15/10/2020 01:28 pm

Cinque Terre

40.91 K

Cinque Terre

5

ಸಂಬಂಧಿತ ಸುದ್ದಿ