ಬೆಂಗಳೂರು: ಸಿನಿಮಾ ಕಲಾನಿರ್ದೇಶಕ, ಚಿತ್ರನಿರ್ದೇಶಕ, ನಿರ್ಮಾಪಕ ಜಿ.ಮೂರ್ತಿ ವಿಧಿವಶರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಮನೆಯಲ್ಲಿ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಅವರು ಬ್ರೈನ್ ಹ್ಯಾಮರೇಜ್‌ನಿಂದಾಗಿ ಇಹಲೋಕ ತ್ಯಜಿಸಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳಿಗೆ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಚಂದ್ರಚಕೋರಿ, ಕರುನಾಡು ಚಿತ್ರಗಳ ಅತ್ಯುತ್ತಮ ಕಲಾ ನಿರ್ದೇಶನಕ್ಕಾಗಿ ಜಿ. ಮೂರ್ತಿ ಅವರಿಗೆ ಎರಡು ಬಾರಿ ರಾಜ್ಯ ಪ್ರಶಸ್ತಿ ಬಂದಿದೆ. ಜಿ. ಮೂರ್ತಿ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
PublicNext
24/10/2020 05:22 pm