ಗದಗ: ಬಸ್- ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಹಿಂಬದಿ ಸವಾರ ಸಾವಿಗೀಡಾಗಿ, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ತಾಲೂಕಿನ ಹೊಂಬಳ ಗದಗ ರಸ್ತೆಯಲ್ಲಿ ನಡೆದಿದೆ.
ಗದಗ ತಾಲೂಕಿನ ಲಿಂಗದಾಳ ಗ್ರಾಮದ ಹನುಮಂತಪ್ಪ ಚಲವಾದಿ (47) ಮೃತಪಟ್ಟಿದ್ದಾರೆ. ಬೈಕ್ ಸವಾರರು ಲಿಂಗದಾಳ ಗ್ರಾಮದಿಂದ ಗದಗ ನಗರಕ್ಕೆ ಹಾಗೂ ಗದಗದಿಂದ ಹೊಂಬಳ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್‌ನ ಚಕ್ರದಡಿ ಸಿಲುಕಿದ ಬೈಕ್ ಹಿಂಬದಿ ಸವಾರ ಮೃತಪಟ್ಟರೆ, ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಗುಂಡಿಗೆ ಬಸ್ ಉರುಳಿದೆ.
ಬೈಕ್ ಚಲಾಯಿಸುತ್ತಿದ್ದ ರೋಹಿತ್ ಚಲವಾದಿ ಹಾಗೂ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
PublicNext
24/08/2022 02:40 pm