ವಿಜಯವಾಡ: ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಹುತಾತ್ಮ ಸೈನಿಕನ ಪತ್ನಿಗೆ ಸಂತಾಪ ಸೂಚಕ ಪತ್ರವನ್ನು ಕಳುಹಿಸಿರುವ ಮುಖ್ಯಮಂತ್ರಿ, ರಾಜ್ಯ ಸರ್ಕಾರದಿಂದ 50 ಲಕ್ಷ ರೂ ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಆಂಧ್ರದ ಚಿತ್ತೂರು ಜಿಲ್ಲೆಯ ಇರಾಲ ಮಂಡಲದ ರೆಡ್ಡಿವಾರಿಪಲ್ಲಿಯಲ್ಲಿನ ಹುತಾತ್ಮ ಯೋಧನ ಗ್ರಾಮಕ್ಕೆ ಭೇಟಿ ನೀಡಿದ ಸಚಿವರಾದ ಕೆ ನಾರಾಯಣ ಸ್ವಾಮಿ, ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿ, ಸಂಸದ ರೆಡ್ಡಪ್ಪ ಮತ್ತು ಶಾಸಕ ಎಂ ಎಸ್ ಬಾಬು ಯೋಧನ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿ ಮುಖ್ಯಮಂತ್ರಿ ಬರೆದ ಪತ್ರವನ್ನು ಹಸ್ತಾಂತರಿಸಿದರು.
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಪ್ರವೀಣ್ ರೆಡ್ಡಿ ಹುತಾತ್ಮರಾಗಿದ್ದರು.
PublicNext
10/11/2020 07:30 am