ಬೆಂಗಳೂರು : ಒಬ್ಬ ಬರಹಗಾರ ಎಲ್ಲರಿಗೂ ಅದು ಅವರದ್ದೇ ಮನದಾಳದ ಮಾತೇನು ಎನ್ನುವಂತೆ ಬರೆಯುವುದು ಸರಸ್ವತಿ ಪುತ್ರರಿಂದ ಮಾತ್ರ ಸಾಧ್ಯ.
ಅಂತಹ ಹೃದಯಸ್ಪರ್ಶಿ ಬರಹಗಾರ ರವಿ ಬೆಳಗೆರೆ ಇನ್ನಿಲ್ಲ ಎನ್ನುವ ನೋವು ಕೋಟ್ಯಾಂತರ ಮನಸ್ಸುಗಳು ಕಣ್ಣೀರು ಹಾಕುವಂತೆ ಮಾಡಿದೆ.
ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ ಎನ್ನುವ ಸುದ್ದಿಯನ್ನಾ ಕನ್ನಡ ಓದುಗರು,ವೀಕ್ಷಕರು ಅರಗಿಸಿಕೊಳ್ಳಲೇಬೇಕಾಗಿದೆ.
ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಹೃದಯಾಘಾತವಾಗಿದೆ.
ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.
ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು. ಅಪರಾಧ ಜಗತ್ತಿನ ಬಗ್ಗೆ ಅವರು ಬರೆದ ಪುಸ್ತಕಗಳಿಗೆ ಲೆಕ್ಕವೇ ಇಲ್ಲ.
ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.
ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ.
1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.
ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.
ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರಾರ್ಥನ ಶಾಲೆಯ ಸಂಸ್ಥಾಪಕರು .
ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿ.
PublicNext
13/11/2020 07:59 am