ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಪೇದೆಗೆ ಬಡ್ತಿ

ನವದೆಹಲಿ- ಕಳೆದ 3 ತಿಂಗಳಲ್ಲಿ ಕಾಣೆಯಾದ 76 ಮಕ್ಕಳನ್ನು ಪತ್ತೆಹಚ್ಚಿದ ದೆಹಲಿಯ ಮಹಿಳಾ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಬಡ್ತಿ ನೀಡಲಾಗಿದೆ. ದೆಹಲಿ ಪೊಲೀಸ್ ಇಲಾಖೆಯು ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚುವ ತನಿಖೆಗಳನ್ನು ಉತ್ತೇಜಿಸಲು ಸಿಬ್ಬಂದಿಗೆ ಬಡ್ತಿ ನೀಡುವ ಉಪಕ್ರಮವನ್ನು ಪ್ರಾರಂಭಿಸಿದೆ.

ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಿಂದ ಕಾಣೆಯಾದ 76 ಮಕ್ಕಳನ್ನು ಪತ್ತೆಹಚ್ಚಲು ಸೀಮಾ ದಾಕಾ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ಬಡ್ತಿ ನೀಡುವ ಮೂಲಕವಾಗಿ ಇವರ ಕೆಲಸಕ್ಕೆ ಉತ್ತೇಜನ ನೀಡಲಾಗಿದೆ ಎಂದು ದೆಹಲಿ ಪೊಲೀಸ್ ವಕ್ತಾರ ಐಶ್ ಸಿಂಘಾಲ್ ಹೇಳಿದ್ದಾರೆ.

ಪೊಲೀಸ್ ಪೇದೆಯಾಗಿದ್ದ ಸೀಮಾ ಈಗ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿ ಬಡ್ತಿ ಪಡೆದಿದ್ದಾರೆ. ಆಗಸ್ಟ್ 7 ರಿಂದ ಕಾಣೆಯಾದ 1,440 ಮಕ್ಕಳನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಮಯದಲ್ಲಿ 1,222 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

Edited By : Nagaraj Tulugeri
PublicNext

PublicNext

19/11/2020 03:54 pm

Cinque Terre

48.22 K

Cinque Terre

8