ಶಿವಮೊಗ್ಗ: ತುಂಗಾ-ಭದ್ರಾ ನದಿಯ ಸಂಗಮವಾಗಿರುವ ಕೂಡ್ಲಿಯಲ್ಲಿ ಈ ಬಾರಿ ಇತಿಹಾಸ ಪ್ರಸಿದ್ಧ ಪುಷ್ಕರ ಸ್ನಾನಕ್ಕೆ ಬ್ರೇಕ್ ಬಿದ್ದಿದೆ. ಕೋವಿಡ್-19 ಸೋಂಕು ಹರಡುವ ಭೀತಿ ಹಿನ್ನೆಲೆ ಈ ಬಾರಿಯ ಪುಷ್ಕರವನ್ನು ನಿಷೇಧಿಸಿ ತಾಲೂಕು ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದುದಕ್ಷಿಣ ಭಾರತದ ವಾರಾಣಸಿ ಎಂದೇ ಖ್ಯಾತಿ ಪಡೆದಿದೆ.
ಶಿವಮೊಗ್ಗ ಜಿಲ್ಲೆಯ ಕೂಡ್ಲಿ, ತುಂಗಾ ಮತ್ತು ಭದ್ರಾ ಎರಡು ನದಿಗಳ ಸಂಗಮವಾಗಿದೆ. ದೇಶದಲ್ಲಿ ನದಿಗಳು ಸೇರುವ ಪವಿತ್ರ ಸ್ಥಳಗಳಲ್ಲಿ ಪ್ರಾಚೀನ ಕಾಲದಿಂದಲೂ ಪುಷ್ಕರ ನಡೆಯುವುದು ಸಂಪ್ರದಾಯವಾಗಿದೆ. ಇಂದಿನಿಂದ 12 ದಿನಗಳ ಕಾಲ ಈ ಪುಷ್ಕರ ಸಂಭ್ರಮ ನಡೆಯುತ್ತದೆ. ಗುರುವು ಇಂದಿನಿಂದ ತನ್ನ ಪಥ ಬದಲಾಯಿಸುತ್ತಿದ್ದು, ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಈ ಪುಣ್ಯ ದಿನಗಳಂದು ಸಾವಿರಾರು ವರ್ಷಗಳ ಪುರಾಣ ಪ್ರಸಿದ್ಧ ತಾಣವಾಗಿರುವ ಕೂಡ್ಲಿಯಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ಪುಷ್ಕರ ಸ್ನಾನ ಮಾಡೋದು ಸಂಪ್ರದಾಯವಾಗಿದೆ. ಆದರೆ ಈ ಬಾರಿ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ರೇಕ್ ಬಿದ್ದಿದೆ.
ಇಂದಿನಿಂದ ಆರಂಭವಾಗಬೇಕಿದ್ದ ಪುಷ್ಕರ ಸ್ನಾನಕ್ಕೆ ತಾಲೂಕಾಡಳಿದಿದ ನಿರ್ಬಂಧ ಹೇರಲಾಗಿದೆ ಕೂಡ್ಲಿ ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ಗ್ರಾಮ ಪಂಚಾಯಿತಿ ಈ ಬಾರಿಯ ಪುಷ್ಕರವನ್ನು ನಿಷೇಧಗೊಳಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಹೊರಗಿನಿಂದ ಬರುವ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ ಪುಷ್ಕರ ಸ್ನಾನ ಮಾಡಿದರು.
PublicNext
20/11/2020 05:12 pm