ನವದೆಹಲಿ: ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ.
ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ.
ಸರ್ದಾರ್ ಪಟೇಲ್ ಅವರು ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಲು ತೋರಿಸಿಕೊಟ್ಟಿರುವ ಮಾರ್ಗ ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಮೊದಲ ಉಪಪ್ರಧಾನಿಯೂ ಆಗಿದ್ದ ಪಟೇಲ್ ಅವರು 1950ರ ಡಿಸೆಂಬರ್ 15 ರಂದು ನಿಧನರಾದರು.
PublicNext
15/12/2020 12:53 pm