ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಗಲಿದ ಅಂಗಡಿಗೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಇಂದು ಬೆಳಗ್ಗೆ ವಿಧಾನಸಭೆ ಸಮಾವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿದರು.

ವಿಷಾದದಿಂದ ಸುರೇಶ ಅಂಗಡಿ ಅವರು ನಿಧನದ ಸುದ್ದಿಯನ್ನು ಸದನಕ್ಕೆ ತಿಳಿಸಿದರು.

2004ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. ನಂತರ 2009 ಮತ್ತು 2014 ಹಾಗೂ 2019ರಲ್ಲಿ ಸತತವಾಗಿ ನಾಲ್ಕನೇ ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು.

ಸಂಸತ್ ನ ವಿವಿಧ ಸ್ಥಾಯಿ ಸಮಿತಿಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದ ಅವರು 2019ರಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು , ಬೆಳಗಾವಿ- ಕಿತ್ತೂರು-ಧಾರವಾಡ ರೈಲು ಮಾರ್ಗಕ್ಕೆ ಅನುಮೋದನೆ ಸೇರಿದಂತೆ ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ.

Edited By : Nirmala Aralikatti
PublicNext

PublicNext

24/09/2020 01:23 pm

Cinque Terre

56.65 K

Cinque Terre

0