ಭುವನೇಶ್ವರ: ಒಡಿಶಾದ ಫುಲ್ಭಾನಿಯ ಶಾಸಕ ಅಂಗದ ಕನ್ಹರ್ ಅವರು ತಮ್ಮ 58ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಈ ಮೂಲಕ ಓದು ಅರ್ಧಕ್ಕೆ ನಿಲ್ಲಿಸಿದ್ದ ಅನೇಕರು ಮತ್ತು ಇತರೆ ಅನಕ್ಷರಸ್ಥ ಜನಪ್ರತಿನಿಧಿಗಳಿಗೆ ಅಂಗದ ಕನ್ಹರ್ ಮಾದರಿಯಾಗಿದ್ದಾರೆ.
ಒಡಿಶಾದಲ್ಲಿ ಶುಕ್ರವಾರದಿಂದ 10ನೇ ತರಗತಿ ಅಥವಾ ಪ್ರೌಢಶಾಲಾ ಪ್ರಮಾಣಪತ್ರ (ಎಚ್ಎಸ್ಸಿ) ಅಂತಿಮ ಪರೀಕ್ಷೆಗಳು ಆರಂಭವಾಗಿವೆ. ಕಂಧಮಾಲ್ ಜಿಲ್ಲೆಯ ಪಟಿಭಾರಿ ಗ್ರಾಮದಲ್ಲಿ ನಡೆದ ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಗೆ ಸರಿಯಾಗಿ ಆಡಳಿತಾರೂಢ ಬಿಜೆಡಿ ಶಾಸಕ ಅಂಗದ ಕನ್ಹರ್ ಅವರು ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಿದ್ದಾರೆ.
ಅಂಗದ ಕನ್ಹರ್ ಅವರು 1978ರಲ್ಲಿ ಅರ್ಧಕ್ಕೆ ಓದು ನಿಲ್ಲಿಸಿದ್ದು ದಶಕಗಳ ಬಳಿಕ ಕ್ರಮ ಸಂಖ್ಯೆಗೆ ಅನುಗುಣವಾಗಿ ಎಕ್ಸಾಂ ಮುಗಿಸಿದರು. ಇವರನ್ನೇ ಮಾದರಿಯಾಗಿಸಿಕೊಂಡ ಕೆಲ ಸ್ನೇಹಿತರು ಮತ್ತು ಸ್ಥಳೀಯ ಸರ್ಪಂಚ್ಗಳೂ ಕೂಡಾ ಪರೀಕ್ಷೆ ಬರೆದು ಗಮನ ಸೆಳೆದರು.
PublicNext
29/04/2022 05:09 pm