ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಏಮ್ಸ್ ನಿರ್ದೇಶಕರಾಗಿ ಕನ್ನಡಿಗ ಶ್ರೀನಿವಾಸ್ ನೇಮಕ

ಬೆಂಗಳೂರು: ದೆಹಲಿಯ ಏಮ್ಸ್ ನಿರ್ದೇಶರಾಗಿರುವ ರಣದೀಪ್ ಗುಲೇರಿಯಾ ಅವರ ಅವಧಿ ಮುಕ್ತಾಯ ಹಿನ್ನೆಲೆ ಅವರ ಸ್ಥಾನಕ್ಕೆ ಪ್ರಸ್ತುತ ಹೈದರಾಬಾದ್ ನ ESIC ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡಿಗ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಹೌದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ ಗೆ (All Indian Institute of Medical Sciences ) ಮುಂದಿನ ನಿರ್ದೇಶಕರಾಗಿ ಡಾ.ಎಂ.ಶ್ರೀನಿವಾಸ್ (Dr M Srinivas) ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.

ಡಾ. ಎಂ.ಶ್ರೀನಿವಾಸ್ ಕನ್ನಡಿಗರಾಗಿದ್ದು ಯಾದಗಿರಿ ಮೂಲದವರಾಗಿದ್ದಾರೆ. ಬಳ್ಳಾರಿಯ ಏಮ್ಸ್ ನಲ್ಲಿ 1984ರ ಬ್ಯಾಚ್ ನ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ದೆಹಲಿಯ ಏಮ್ಸ್ ನಲ್ಲಿಯೇ (AIIMS) ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು. ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಡಾ.ಶ್ರೀನಿವಾಸ್ ಮುಂದಿನ ಐದು ವರ್ಷ ಕಾರ್ಯನಿರ್ವಹಿಸಲಿದ್ದಾರೆ.

Edited By : Nirmala Aralikatti
PublicNext

PublicNext

24/09/2022 07:27 pm

Cinque Terre

102.51 K

Cinque Terre

10

ಸಂಬಂಧಿತ ಸುದ್ದಿ