ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್ ಆಗಿರುವ ಸಾವಿರಾರು ವಿದ್ಯಾರ್ಥಿಗಳು ಈಗ ತಮ್ಮ ಎಂಬಿಬಿಎಸ್ ಪದವಿ ಹಾಗೂ ಪೂರೈಸುವುದು ಎನ್ನುವ ಚಿಂತೆ ಶುರುವಾಗಿದೆ. ಅಷ್ಟೇ ಅಲ್ಲದೆ ವೈದ್ಯಕೀಯ ಶಿಕ್ಷಣ ಪಡೆದು ಇಂಟರ್ನ್ ಶಿಪ್ ಅರ್ಧಕ್ಕೆ ನಿಲ್ಲಿಸಿದವರಿಗೆ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂಟರ್ನ್ ಶಿಪ್ ಅರ್ಧಕ್ಕೆ ನಿಲ್ಲಿಸಿ ಉಕ್ರೇನ್‌ನಿಂದ ಹಿಂದಿರುಗಿದ ಮೆಡಿಕಲ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಪೂರ್ಣ ಮಾಡಲು NMC ಅನುಮತಿ ನೀಡಿದೆ. ನಾಲ್ಕು ವರ್ಷದ ಮೆಡಿಕಲ್ ಶಿಕ್ಷಣ ಮುಗಿಸಿದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಇಂಟರ್ನ್ ಶಿಪ್ ಮಾಡಬೇಕು. ಇದಕ್ಕೆ ಈಗ ಎನ್‌ಎಂಸಿ ಅನುಮತಿ ನೀಡಿರುವುದು ಅನೇಕ ವಿದ್ಯಾರ್ಥಿಗಳಿಗೆ ಸಂತಸ ತಂದಿದೆ.
PublicNext
05/03/2022 11:04 am