ಗದಗ: ಜಿಲ್ಲೆಯ ರೋಣ ತಾಲೂಕಿನ ನೆರೇಗಲ್ ಅನ್ನದಾನೇಶ್ವರ ಪಿಯು ಕಾಲೇಜ್ ವಿದ್ಯಾರ್ಥಿ ಶಿವರಾಜ್ ಡಿ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಪಿಯುಸಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕ ಗಳಿಸುವ ಮೂಲಕ ಶಿವರಾಜ್ ಡಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಗಳಿಸಿದಾರೆ. ಇತಿಹಾಸ, ಅರ್ಥಶಾಸ್ತ್ರ, ಭೂಗೋಳಶಾಸ್ತ್ರ, ರಾಜ್ಯಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾನೆ. ಕನ್ನಡ 98, ಇಂಗ್ಲೀಷ್ 95 ಅಂಕ ಪಡೆದು ಕಲಾ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ.
ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಬಳಿಯ ಯಲಗಟ್ಟ ಗ್ರಾಮದ ನಿವಾಸಿಯಾಗಿರೋ ಶಿವರಾಜ್ ಕಷ್ಟಪಟ್ಟು ಓದಿ ಈ ಸಾಧನೆ ಮಾಡಿದ್ದಾನೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ ಶೇ 96ರಷ್ಟು ಅಂಕ ಪಡೆದು ಶಿವರಾಜ್ ಸಾಧನೆ ಮಾಡಿದ್ದರು. ಇಂದು ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿ ಶಿವರಾಜ್ ಮುಂದಿನ ಶಿಕ್ಷಣದ ವೆಚ್ಚಕ್ಕಾಗಿ ತುಮಕೂರಿನಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ.
PublicNext
19/06/2022 10:22 pm