ದೆಹಲಿ: ರಷ್ಯಾ ನಿರ್ಮಿತ ಮಿಗ್ -21 ಯುದ್ಧವಿಮಾನದಿಂದ ಅಮೆರಿಕ ನಿರ್ಮಿತ ಎಫ್-16 ಯುದ್ಧವಿಮಾನ ಹೊಡೆದುರುಳಿಸಿದ ವಿಶ್ವದ ಮೊದಲ ಮೊದಲ ಪೈಲಟ್ ಎಂಬ ಶ್ರೇಯಕ್ಕೂ ಅಭಿನಂದನ್ ಪಾತ್ರರಾಗಿದ್ದಾರೆ. ಸದ್ಯ ಇವರಿಗೆ ಮತ್ತೊಂದು ಗೌರವದ ಗರಿ ಸಂದಿದೆ. ಅಭಿನಂದನ್ ವರ್ಧಮಾನ್ ಅವರಿಗೆ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ನೀಡಿದೆ.
2019ರ ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ವಾಯುದಾಳಿಯಲ್ಲಿ ನಿರ್ವಹಿಸಿದ ಪಾತ್ರಕ್ಕಾಗಿ ಅಭಿನಂದನ್ ಅವರಿಗೆ ಈ ಹಿಂದೆ ಶೌರ್ಯಚಕ್ರ ನೀಡಿ ಗೌರವಿಸಲಾಗಿತ್ತು.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಭಿನಂದನ್ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಆದರೆ ಅವರಿದ್ದ ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಜನರಿಗೆ ಸಿಕ್ಕಿಬಿದ್ದಿದ್ದರು. ನಂತರ ಪಾಕ್ ಯೋಧರು ಅವರನ್ನು ಬೇರೆಡೆಗೆ ಕರೆದೊಯ್ದಿದ್ದರು.
ಬಂಧನದ ಅವಧಿಯಲ್ಲಿಯೂ ಅವರು ಆತ್ಮಗೌರವ ಕಾಪಾಡಿಕೊಂಡ ರೀತಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
PublicNext
03/11/2021 06:16 pm