ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನಂತರ ದೇಹ ದಾನ: ಮೃತ ನವೀನ್ ತಂದೆ ಹೇಳಿಕೆ

ಹಾವೇರಿ : ಉಕ್ರೇನ್ ಯುದ್ಧ ಭೂಮಿಯಲ್ಲಿ ರಷ್ಯಾ ಸೇನಾ ದಾಳಿಗೆ ಬಲಿಯಾದ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಿಸಲಾಗಿದೆ. ಇಂದು ಮುಂಜಾನೆ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹ ಆಗಮಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕುಟುಂಬಸ್ಥರು ಸೇರಿ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು. ಅವರ ಪಾರ್ಥಿವ ಶರೀರಕ್ಕೆ ಇಂದು ಸ್ವಗ್ರಾಮ ಚಳಗೇರಿಯಲ್ಲಿ ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ ಬಳಿಕ, ಎಸ್‌ಎಸ್ ಆಸ್ಪತ್ರೆಗೆ ಕುಟುಂಬಸ್ಥರು ದೇಹದಾನ ಮಾಡಲಿದ್ದಾರೆ.

ಈ ಬಗ್ಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ನವೀನ್ ತಂದೆ ಶೇಖರಗೌಡ ಅವರು, ಇಂದು ಊರಿಗೆ ಆಗಮಿಸುತ್ತಿರುವಂತ ನವೀನ್ ಪಾರ್ಥೀವ ಶರೀರಕ್ಕೆ ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಗುತ್ತದೆ. ಅಂತಿಮ ವಿಧಿ ವಿಧಾನದ ಬಳಿಕ, ಊರಿನಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದೆ. ಈ ಬಳಿಕ ಅವರ ದೇಹವನ್ನು ಎಸ್.ಎಸ್ ಆಸ್ಪತ್ರೆಗೆ ದಾನವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

21/03/2022 08:17 am

Cinque Terre

39.73 K

Cinque Terre

3

ಸಂಬಂಧಿತ ಸುದ್ದಿ