ಕೀವ್: ಯುದ್ಧಗ್ರಸ್ಥ ಉಕ್ರೇನ್ ಸದ್ಯ ಹೆಚ್ಚು-ಕಡಿಮೆ ಅವಶೇಷದ ದೇಶ ಎಂಬಂತಾಗಿದೆ. ಈ ನಡುವೆ ಮತ್ತೊಂದು ವಿಡಿಯೋ ಹರಿಬಿಟ್ಟಿರುವ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ದೇಶದ ರಾಜಧಾನಿ ಕೀವ್‌ನಲ್ಲಿದ್ದೇನೆ. ನಾನು ಇಲ್ಲಿಯೇ ಇದ್ದುಕೊಂಡು ಕೆಲಸ ಮಾಡುತ್ತಿದ್ದೇನೆ. ಹೊರತಾಗಿ ಎಲ್ಲಿಯೂ ತಪ್ಪಿಸಿಕೊಂಡು ಹೋಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಝೆಲೆನ್ಸ್ಕಿ ಅವರು ಪ್ರಾಣಭೀತಿಯಿಂದ ಪೋಲೆಂಡ್‌ಗೆ ಪಲಾಯನ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಉತ್ತರಿಸಿರುವ ಝೆಲೆನ್ಸ್ಕಿ ಇನ್‍ಸ್ಟಾಗ್ರಾಮ್ ಮೂಲಕ ವೀಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವೀಡಿಯೋದಲ್ಲಿ ಝೆಲೆನ್ಸ್ಕಿ ತಮ್ಮ ಕಚೇರಿಯಲ್ಲಿಯೇ ಇರುವುದು ಹಾಗೂ ಅವರ ಜೊತೆಗೆ ಮತ್ತೊಬ್ಬ ಅಧಿಕಾರಿ ಕೂಡ ಇರುವುದು ಕಂಡು ಬಂದಿದೆ. ನಾನು ಕೀವ್‍ನಲ್ಲಿದ್ದೇನೆ. ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ, ಹೊರತಾಗಿ ತಪ್ಪಿಸಿಕೊಂಡು ಹೋಗಿಲ್ಲ ಎಂದು ವೀಡಿಯೋಗೆ ಶೀರ್ಷಿಕೆ ನೀಡಿದ್ದಾರೆ.
PublicNext
05/03/2022 08:23 pm