ಗಾಯನ ಲೋಕದ ಸಂಗೀತ ಮಾಂತ್ರಿಕ, ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೊಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ.
ಲೈಫ್ ಸಪೋರ್ಟ್ ನಲ್ಲಿ ವೈದ್ಯರು ಚಿಕಿತ್ಯೆ ನೀಡುತ್ತಿದ್ದು. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್ಪಿ ಬಿ ಅವರ ಚಿಕಿತ್ಸೆ ಮುಂದುವರೆದಿದೆ.
ಕಳೆದ 24 ಗಂಟೆಯಿಂದ ಎಸ್ಪಿಬಿ ಆರೋಗ್ಯ ಕ್ಷೀಣಿಸುತ್ತಿದ್ದು, ಹೆಚ್ಚು ಲೈಫ್ ಸಪೋರ್ಟ್ ಸಾಧನಗಳನ್ನು ಬಳಕೆ ಮಾಡಲಾಗುತ್ತಿದೆ.
ಎಂಜಿಎಂ ಆಸ್ಪತ್ರೆಯ ನುರಿತ ವೈದ್ಯರ ತಂಡ ಎಸ್ಪಿಬಿ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ವೀಡಿಯೋ ಪೋಸ್ಟ್ ಮಾಡಿದ್ದ ಎಸ್ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ.
ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ.
ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.
ಸದ್ಯ ಸಂಗೀತ ಮಾಂತ್ರಿಕ ಆದಷ್ಟು ಬೇಗ ಗುಣಮುಖರಾಗಿ ಮರಳಿ ಮನೆಗೆ ಬರುವಂತಾಗಲಿ ಎಂಬುದು ಎಲ್ಲರ ಪ್ರಾರ್ಥನೆಯಾಗಿದೆ.
PublicNext
25/09/2020 01:15 pm