ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪುತ್ರಿ, ಡಿಎಸ್‌ಪಿಗೆ ಸೆಲ್ಯೂಟ್ ಹೊಡೆದು ಗೌರವ ತೋರಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಂಟೂರು ಜಿಲ್ಲೆಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಆಗಿ ನೇಮಕಗೊಂಡಿರುವ ಪುತ್ರಿ ಜೆಸ್ಸಿ ಪ್ರಶಾಂತಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಗೌರವ ಸಲ್ಲಿಸಿದರು. ಈ ಫೋಟೋಗೆ ನೆಟ್ಟಿಗರು ತಮ್ಮದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
PublicNext
04/01/2021 04:07 pm