ಮಂಗಳೂರು: ಪ್ರಯಾಣಿಕರೊಬ್ಬರು ಬಸ್‌ನಲ್ಲಿ ಬಿಟ್ಟು ಹೋಗಿದ್ದ 70 ಸಾವಿರ ರೂ. ಮೌಲ್ಯದ ವಸ್ತುಗಳಿದ್ದ ಬ್ಯಾಗನ್ನು ಹಿಂದಿರುಗಿಸುವ ಮೂಲಕ ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಜನವರಿ 16ರಂದು ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರಯಾಣಿಕರೊಬ್ಬರು ಲ್ಯಾಪ್ಟಾಪ್, ಸೇರಿದಂತೆ ವಿವಿಧ ಸುಮಾರು 70 ಸಾವಿರ ರೂ. ಮೌಲ್ಯದ ವಸ್ತುಗಳಿದ್ದ ಬ್ಯಾಗನ್ನು ಕೆಎ 21 ಎಫ್ 0039 ಸಂಖ್ಯೆಯ ಬಸ್‌ನಲ್ಲಿಯೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಇಸುಬ್ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ.
ಅವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್ ಬಿಟ್ಟು ಹೋಗಿದ್ದ ಪ್ರಯಾಣಿಕ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಅವರಿಗೆ ಬ್ಯಾಗ್ ಹಿಂದಿರುಗಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಯನ್ನು ಮೆಚ್ಚಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
PublicNext
18/01/2021 01:22 pm