ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಅರಕಲಗೂಡು: ದೇಸ ರಕ್ಷಣೆಗಾಗಿ ಹಗಲಿರುಳು ಶ್ರಮಿಸುವ ಯೋಧರ ಕಾರ್ಯ ನಿಜಕ್ಕೂ ಶ್ಲಾಘನೀಯ ಇಂತಹ ವೀರ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪಟ್ಟಣದ ಯೋಧ ಬಿ.ಆರ್. ರಾಕೇಶ್ (24) ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಬಾಣದಹಳ್ಳಿಯಲ್ಲಿ ನೆರವೇರಿತು.

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ ಯೋಧನನ್ನು ಹರಿಯಾಣದ ಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ತಾಲ್ಲೂಕು ಕಚೇರಿ ಆವರಣಕ್ಕೆ ಬಂದ ಯೋಧನ ಪಾರ್ಥಿವ ಶರೀರಕ್ಕೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಾಲ್ಲೂಕು ಆಡಳಿತದ ಪರವಾಗಿ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು.

ಬಳಿಕ 8.30ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎ.ಟಿ.ರಾಮಸ್ವಾಮಿ, ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಪ್ರಮುಖರು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.ಸ್ವಗ್ರಾಮ ಬಾಣದಹಳ್ಳಿ ಗ್ರಾಮಕ್ಕೆ ಯೋಧನ ಮೃತದೇಹ ಬಂದಾಗ ಕುಟುಂಬದವರ ರೋಧನ ಮುಗಿಲು ಮುಟ್ಟಿತು. ಸ್ವಲ್ಪ ಸಮಯ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿ ಬಳಿಕ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಸಶಸ್ತ್ರ ಮೀಸಲು ಪಡೆಯ ಪೊಲೀಸರು ಹಾಗೂ ಯೋಧರು ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.

Edited By : Nirmala Aralikatti
PublicNext

PublicNext

09/02/2021 07:29 pm

Cinque Terre

39.45 K

Cinque Terre

6

ಸಂಬಂಧಿತ ಸುದ್ದಿ