ನವದೆಹಲಿ: ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಅತಿರೇಕಕ್ಕೆ ತಿರುಗಿದ್ದು, 107 ಭಾರತೀಯರು ಸೇರಿ ಒಟ್ಟು 168 ಜನರನ್ನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಕರೆ ತರಲಾಗಿದೆ. ಭಾರತೀಯ ವಾಯು ಸೇನೆಯ ಸಿ-17 ವಿಮಾನದ ಮೂಲಕ ಕಾಬೂಲ್‍ನಿಂದ 168 ಜನ ಇಂದು ಬೆಳಗ್ಗೆ ದೆಹಲಿ ಬಳಿಯ ಗಾಜಿಯಾಬಾದ್‌ನ ಹಿಂಡಾನ್ ವಾಯುನೆಲೆಗೆ ಸುರಕ್ಷಿತವಾಗಿ ಆಗಮಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವಾಲಯದ ಅರಿಂದಮ್ ಬಾಗ್ಚಿ ಅವರು, ಸ್ಥಳಾಂತರಿಸುವ ಕಾರ್ಯ ಮುಂದುವರಿದಿದ್ದು, ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರು ಭಾರತಕ್ಕೆ ಬಂದಿಳಿದಿದ್ದಾರೆ ಎಂದಿದ್ದಾರೆ.
ಇತ್ತ ವಿಮಾನ ವಾಯುನೆಲೆಯಲ್ಲಿ ಬಂದಿಳಿಯುತ್ತಿದ್ದಂತೆ ತಾಯಿ ಕಂಕುಳಲ್ಲಿದ್ದ ಶಿಶುವೊಂದಕ್ಕೆ ಹಿರಿಯ ಬಾಲಕಿ ಸಂತೋಷದಿಂದ ಮುತ್ತಿಕ್ಕಿ ಮುದ್ದಾಡಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
22/08/2021 05:14 pm