ಗುಡಿಬಂಡೆ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಕೋಳಿ ಸಾಗಿಸಿದ್ದಾರೆ. ಬಸ್ ಕಂಡಕ್ಟರ್ ಆ ಕೋಳಿಗೂ ಹಾಫ್ ಟಿಕೆಟ್ ನೀಡಿದ್ದಾರೆ. ಇದಕ್ಕೆ ಅಸಮಧಾನಗೊಂಡ ಆ ಪ್ರಯಾಣಿಕ ಕೋಳಿಯನ್ನು ಸೀಟ್ ಮೇಲೆ ಕೂರಿಸಿದ್ದಾರೆ.
ಚಿಕ್ಕಬಳ್ಳಾಪುರ ಘಟಕದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪೆರೇಸಂದ್ರದಿಂದ ಗುಡಿಬಂಡೆ ತಾಲೂಕಿನ ಸೋಮೇಶ್ವರಕ್ಕೆ ಹೋಗುತ್ತಿದ್ದ ಪ್ರಯಾಣಿಕ ತನ್ನ ಜತೆ ಕೋಳಿ ಕೊಂಡೊಯ್ಯುತ್ತಿದ್ದ. ಈ ವೇಳೆ ನಿರ್ವಾಹಕ ಕೋಳಿಗೂ 5 ರೂ. ಟಿಕೆಟ್ ನೀಡಿದ. ಟಿಕೆಟ್ ಪಡೆದ ಮಾಲೀಕ ಕೋಳಿಯನ್ನು ಸೀಟ್ ಮೇಲೆ ಕೂರಿಸಿ ಪ್ರಯಾಣ ಬೆಳೆಸಿದ್ದಾರೆ. ಅಲದಕಿ ಬಂದ ಇತರ ಪ್ರಯಾಣಿಕರು ಕೋಳಿ ತೆಗೆದು ಸೀಟ್ ಬಿಟ್ಟು ಕೊಡಿ ಎಂದು ಕೇಳಿದಾಗ, ನಾನು ಟಿಕೆಟ್ ಪಡೆದಿದ್ದೇನೆ. ಹಾಗಾಗಿ ಕೋಳಿಯನ್ನು ನನ್ನ ಜತೆ ಸೀಟ್‌ನಲ್ಲಿ ಕೂರಿಸಿದ್ದೇನೆ ಎಂದು ಪ್ರಯಾಣಿಕ ಉತ್ತರ ನೀಡಿದ್ದಾನೆ.
PublicNext
01/09/2021 07:30 am