ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ರಂಗಕರ್ಮಿ ಜಿ.ಕೆ ಗೋವಿಂದ ರಾವ್ ನಿಧನ

ಬೆಂಗಳೂರು: ಹಿರಿಯ ರಂಗಕರ್ಮಿ ಹಾಗೂ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಜಿ.ಕೆ ಗೋವಿಂದ ರಾವ್ ಅವರು ಹುಬ್ಬಳ್ಳಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ವಿಮರ್ಶಾ ಕೃತಿಗಳು, ಸಂಕೀರ್ಣ ಬರಹಗಳ ಸಂಗ್ರಹಗಳು ಸೇರಿದಂತೆ ಹಲವಾರು ಕೃತಿಗಳನ್ನು ಅವರು ರಚಿಸಿದ್ದಾರೆ. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

Edited By : Nagaraj Tulugeri
PublicNext

PublicNext

15/10/2021 10:04 am

Cinque Terre

36.16 K

Cinque Terre

5