ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ವೀರಶೈವ ಸಂಪ್ರದಾಯದಂತೆ ಸಕಲ ಪೊಲೀಸ್ ಗೌರವಗಳೊಂದಿಗೆ ಸಾಹಿತಿ ಚಂಪಾ ಅಂತ್ಯಸಂಸ್ಕಾರ ಮಾಡಲಾಯಿತು.
ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಚಂದ್ರಶೇಖರ ಪಾಟೀಲ್ ರ ಅಂತಿಮ ದರ್ಶನ ಪಡೆದರು.
PublicNext
10/01/2022 07:15 pm