ಬೆಂಗಳೂರು: ‘ನನ್ನಮ್ಮ ಸೂಪರ್ ಸ್ಟಾರ್’ ಸೂಪರ್ ಸ್ಟಾರ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸುತ್ತಿದ್ದ ಬಾಲ ಪ್ರತಿಭೆ ಸಮನ್ವಿ ನಿನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಇಂದು ಈ ಬಾಲ ಪ್ರತಿಭೆಯ ಅಂತ್ಯಕ್ರಿಯೆ ಇಂದು ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ.
ಇಂದು ಬೆಳಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಸಮನ್ವಿ ಮೃತದೇಹವನ್ನು ಲಿಬರ್ಟಿ ಅಪಾರ್ಟ್ ಮೆಂಟ್ ಗೆ ತರಲಾಗಿತ್ತು. ಆದರೆ ಲಿಬರ್ಟ್ ಅಪಾರ್ಟ್ ಮೆಂಟ್ ನಲ್ಲಿ 20 ಮಂದಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಒಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಅಪಾರ್ಟ್ ಮೆಂಟ್ ಪ್ರವೇಶ ದ್ವಾರದ ಬಳಿಯೇ ಸಮನ್ವಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಸಿನಿಮಾ ಹಾಗೂ ಧಾರವಾಹಿ ಕಲಾವಿದರು ಅಂತಿಮ ದರ್ಶನ ಪಡೆದು ಕಣ್ಣೀರಾಕಿದ್ದಾರೆ. ಇತ್ತ ಸಮನ್ವಿ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಮಗು ಸಮನ್ವಿಗೆ ಬಲಿಜ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ಮಾಡಲಾಯಿತು.
PublicNext
14/01/2022 04:22 pm