ಬೆಂಗಳೂರು: ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಜ.22 ರ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಇಂದು ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.
ಜಸ್ಟೀಸ್ ಕೆ.ಎಲ್.ಮಂಜುನಾಥ್ 13-09-1974 ರಂದು ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು. 11-12-2000 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 27-10-2001 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.
PublicNext
23/01/2022 08:03 am