ದೆಹಲಿ : 73ನೇ ಗಣರಾಜ್ಯೋತ್ಸವದ ದಿನದಂದು ರಾಷ್ಟ್ರಪತಿ ಅಂಗರಕ್ಷಕ ಪಡೆ ಕುದುರೆ ವಿರಾಟ್ ಸೇವೆಯಿಂದ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕುದುರೆಯನ್ನು ಮುದ್ದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕುದುರೆ ವಿರಾಟ್ ಅವರನ್ನು ಪ್ರೀತಿಯಿಂದ ಬೀಳ್ಕೊಟ್ಟರು.
"ರಾಷ್ಟ್ರಪತಿಯ ಅಂಗರಕ್ಷಕ ಕುದುರೆ ವಿರಾಟ್ ಇಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಅದಕ್ಕೆ ಈ ವರ್ಷ ಸೇನಾ ಮುಖ್ಯಸ್ಥರ ಪ್ರಶಂಸಾ ಪದಕವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಬೀಳ್ಕೊಟ್ಟರು" ಎಂದು ಸುದ್ದಿ ಸಂಸ್ಥೆ ANI ತನ್ನ ಅಧಿಕೃತ ಟ್ವಿಟರ್ ನಿಂದ ಟ್ವೀಟ್ ಮಾಡಿದೆ.
PublicNext
26/01/2022 11:01 pm