ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾವೈಕ್ಯತೆಯ ಹರಿಕಾರ ಇಬ್ರಾಹಿಂ ಸುತಾರ ನಿಧನ

ಬಾಗಲಕೋಟೆ : ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ

ಮಹಾಲಿಂಗಪೂರದಲ್ಲಿ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಹೃದಯಾಘಾತದಿಂದ ಸುತಾರ್ ನಿಧನರಾದರು. ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಂಬಂಧಿ ನೋವಿನಿಂದ ಬಳಲಿದ ಅವರು, ಸೂಕ್ತ ಚಿಕಿತ್ಸೆಯನ್ನು ಸಹ ಪಡೆದಿದ್ದರು.

ಆದರೆ ಇಂದು ಬೆಳಿಗ್ಗೆ ಮತ್ತೇ ಲಘು ಹೃದಯಾಘಾತವಗುತ್ತಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಬ್ರಾಹಿಂ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಸುತಾರ್ ಅಗಲಿದ್ದಾರೆ.

1995 ರಲ್ಲಿ ಎಚ್ ಡಿ ದೇವೇಗೌಡರಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2018 ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದರು.

ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆ ಸಂದೇಶ ಸಾರಿ ಹೆಸರು ವಾಸಿಯಾಗಿದ್ದ ಹಿಂದೂ ಮುಸ್ಲಿಂ ಭಾವೈಕ್ಯತೆ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್ ಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ,ರಾಜ್ಯ ಮಟ್ಟದ ಹಲವು ಪ್ರಶಸ್ತಿ ಪುರಸ್ಕಾರಗಳು ಸಂದಿವೆ.

Edited By : Nagesh Gaonkar
PublicNext

PublicNext

05/02/2022 10:07 am

Cinque Terre

162.15 K

Cinque Terre

65