ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾವಲ್ಲೂ ಸಾರ್ಥಕತೆ ತೋರಿದ ಆರ್‌ಜೆ ರಚನಾ: ಕುಟುಂಬಸ್ಥರಿಂದ ಅಂಗಾಂಗ ದಾನ

ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಆರ್‌ಜೆ ರಚನಾ (39) ಸಾವಿನಲ್ಲೂ ಸಾರ್ಥಕತೆ ತೋರಿದ್ದಾರೆ. ರಚನಾ ಅವರ ಅಂಗಾಂಗಗಳನ್ನು ಅವರ ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದಾರೆ. ಇಂದು ಮಂಗಳವಾರ ಬೆಳಗ್ಗೆ ರಚನಾ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಲವು ಆರ್‌ಜೆ ಷೋಗಳಲ್ಲಿ ಅವರ ಮಾತು ಕೇಳಲು ಕೇಳುಗರು ಹಾತೊರೆಯುತ್ತಿದ್ದರು. ಮತ್ತು ಅವರಿಗೆ ತಮ್ಮದೇ ಆದ ಅಭಿಮಾನಿ ವರ್ಗವೂ ಸೃಷ್ಟಿಯಾಗಿತ್ತು. ಚಂದನವನದ ಅನೇಕ ತಾರೆಗಳು ಇವರ ಷೋನಲ್ಲಿ ಭಾಗವಹಿಸಲು ಕಾಯುತ್ತಿದ್ದರು. ಇತ್ತೀಚಿನ ಕೆಲವು ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲೇ ಇದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾ ಕರೆಸ್ಟ್‍ನಿಂದಾಗಿ ನಿಧನರಾಗಿದ್ದಾರೆ. ಅವರ ಕುಟುಂಬಸ್ಥರು ರಚನಾ ಮೃತದೇಹದ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದು ಇತರರರಿಗೆ ಮಾದರಿಯಾಗಿದ್ದಾರೆ.

Edited By : Nagaraj Tulugeri
PublicNext

PublicNext

22/02/2022 07:01 pm

Cinque Terre

48.58 K

Cinque Terre

0

ಸಂಬಂಧಿತ ಸುದ್ದಿ