ಕೋಲ್ಕತ್ತಾ: ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿದೆ. ಉಕ್ರೇನ್ ನಲ್ಲಿರುವ ಭಾರತೀಯ ನಾಗರಿಕರನ್ನು ಕರೆತರಲು ಭಾರತ ಸರ್ಕಾರ ‘ಆಪರೇಷನ್ ಗಂಗಾ’ ಎಂಬ ಕಾರ್ಯಾಚರಣೆ ನಡೆಸಿ ಎಲ್ಲರನ್ನು ಮರಳಿ ತಾಯ್ನಾಡಿಗೆ ಕರೆತಂದಿದೆ. ಯುದ್ಧ ಭೂಮಿಯಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಮೂಲಕ 24 ವರ್ಷದ ಭಾರತೀಯ ಮಹಿಳಾ ಪೈಲಟ್ ಗಮನ ಸೆಳೆದಿದ್ದಾರೆ.
ಹೌದು ಕೋಲ್ಕತ್ತಾದ ಮಹಾಶ್ವೇತಾ ಚಕ್ರವರ್ತಿ ಎನ್ನುವ ಪೈಲಟ್ ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ 800 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಆಪರೇಷನ್ ಗಂಗಾದ ಸದಸ್ಯರಾಗಿರುವ ಚಕ್ರವರ್ತಿ, ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ಸಿಲುಕಿರುವ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಫೆಬ್ರವರಿ 27 ಮತ್ತು ಮಾರ್ಚ್ 7ರ ನಡುವೆ ಪೋಲೆಂಡ್ ನಿಂದ ನಾಲ್ಕು ಮತ್ತು ಹಂಗೇರಿಯಿಂದ ಎರಡು ವಿಮಾನಗಳಲ್ಲಿ ವಿದ್ಯಾರ್ಥಿಗಳನ್ನು ಸ್ಥಾಳಾಂತರಿಸುವಲ್ಲಿ ಕಾರ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
PublicNext
14/03/2022 05:34 pm