ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಸಸಿಹಿತ್ಲು ಸಂಪರ್ಕ ರಸ್ತೆಯ ಕದಿಕೆ ಸೇತುವೆ ಬಳಿ ವೃದ್ಧೆಯೊಬ್ಬರ ಮೃತದೇಹ ಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೃತ ವೃದ್ದೆಯನ್ನು ಹಳೆಯಂಗಡಿ ಸಮೀಪದ ಲೈಟ್ ಹೌಸ್ ನಿವಾಸಿ ನರ್ಸಿ(70) ಎಂದು ಗುರುತಿಸಲಾಗಿದೆ. ಮೃತ ಮಹಿಳೆ ನರ್ಸಿ ತನ್ನ ಮಗನ ಜೊತೆ ಹಳೆಯಂಗಡಿಯ ಲೈಟ್ ಹೌಸ್ ಬಳಿ ವಾಸಿಸುತ್ತಿದ್ದು ಮಾನಸಿಕ ಅಸ್ವಸ್ಥರಾಗಿದ್ದು ಏಕಾಏಕಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನಡೆದುಕೊಂಡು ಬಂದು ಕದಿಕೆ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಇದೇ ರೀತಿ ಹಳೆಯಂಗಡಿಯ ಇಂದ್ರ ನಗರ ರೈಲ್ವೇ ಹಳಿ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದು ಸ್ಥಳೀಯರು ರಕ್ಷಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆ ಪುತ್ರ ಗೌರೀಶ್ ನೀಡಿದ ದೂರಿನಂತೆ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
PublicNext
04/08/2022 05:04 pm