ಶಿವಮೊಗ್ಗ: ಕರ್ನಾಟಕದ ಸಂಸ್ಕೃತ ಗ್ರಾಮ ಎಂದೇ ಖ್ಯಾತಿ ಹೊಂದಿರುವ ಶಿವಮೊಗ್ಗ ಜಿಲ್ಲೆಯ ಮತ್ತೂರು ಗ್ರಾಮಕ್ಕೆ ಎಡಿಜಿಪಿ ಅಲೋಕ್‌ಕುಮಾರ್ ಭೇಟಿ ನೀಡಿದ್ದಾರೆ.
ಗ್ರಾಮದ ನಿವಾಸಿಗಳೊಂದಿಗೆ ಕೆಲಹೊತ್ತು ಸಮಾಲೋಚನೆ ನಡೆಸಿದ್ದಾರೆ. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್‌ಕುಮಾರ್, ಸಂಸ್ಕೃತ ಗ್ರಾಮದ ಗ್ರಾಮಸ್ಥರೊಂದಿಗೆ ಕೆಲಹೊತ್ತು ಉಭಯ ಕುಶಲೋಪರಿಯ ಮಾತನಾಡಿದ್ದಾರೆ. ವಿಶೇಷ ಎಂದರೆ ಎಡಿಜಿಪಿ ಅಲೋಕ್‌ಕುಮಾರ್ ಕೂಡ ಸಂಸ್ಕೃತದಲ್ಲೇ ಮಾತನಾಡಿದ್ದಾರೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
PublicNext
18/08/2022 05:14 pm