ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ್ ರಾಣೆ ನಿಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ವಿದ್ಯಾದಾನ ಮಾಡಿದ್ದ ಮಾಜಿ ಸಚಿವ ಪ್ರಭಾಕರ್ ರಾಣೆ (81) ಅವರು ಶಿಕ್ಷಕರ ದಿನವಾದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ತಿಂಗಳ ಹಿಂದೆ ಅವರು ಜ್ವರದಿಂದ ಬಳಲಿ, ಕಾರವಾರದ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕೊಂಚ ಚೇತರಿಸಿಕೊಂಡು ಸದ್ಯ ಮನೆಯಲ್ಲಿ ಹಾಸಿಗೆಯಲ್ಲೇ ಇದ್ದರು. ಆದರೆ ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕಾರವಾರ- ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಣೆ, ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿದ್ದರು. ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರ್ಪಡೆಗೊಂಡು ಸೇವೆ ಸಲ್ಲಿಸಿದ್ದ ಅವರು, ಬಳಿಕ ಅದೇ ಸಂಸ್ಥೆಗೆ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಆರಂಭಿಸಿ, ವಿವಿಧೆಡೆ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದರು.

Edited By : Abhishek Kamoji
PublicNext

PublicNext

05/09/2022 05:06 pm

Cinque Terre

13.69 K

Cinque Terre

0

ಸಂಬಂಧಿತ ಸುದ್ದಿ