ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಎದೆನೋವಿನಿಂದ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು : ನಾದಬ್ರಹ್ಮ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವಿಷಯ ತಿಳಿದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದ್ರೆ ವೈದ್ಯರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ವಿಷಯ ತಿಳಿದು ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಹಂಸಲೇಖ ಅವರು ಓಪನ್​ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

10/10/2022 01:42 pm

Cinque Terre

124.52 K

Cinque Terre

12

ಸಂಬಂಧಿತ ಸುದ್ದಿ