ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಪ್ರತಿಭಟನೆ : ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿ ಬಂದ್ !

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ವಿವಿಧ ರೈತ ಸಂಘಟನೆಗಳು ಇಂದು (ಡಿ.13-ಭಾನುವಾರ) ಭಾರೀ ಸರಣಿ ಪ್ರತಿಭಟನೆಗಳಿಗೆ ಕರೆ ನೀಡಿವೆ.

ಬೆಳಗ್ಗೆ 11 ಗಂಟೆಗೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಿರುವ ರೈತರು, ಹೆದ್ದಾರಿಯಲ್ಲಿ ದಿನವಿಡೀ ಧರಣಿ ನಡೆಸಲಿದ್ದಾರೆ.

ತಮ್ಮ ಟ್ರ್ಯಾಕ್ಟರ್ ಗಳನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಲಿರುವ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ದೈನಂದಿನ ಚಟುವಟಿಕೆಗಳಿಗೆ ತಡೆಯೊಡ್ಡಲಿದ್ದಾರೆ.

ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಯತ್ನಿಸಿದ ರೈತರನ್ನ ಪೊಲೀಸರು ತಡೆದಿದ್ದಾರೆ.

ಇದೀಗ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಿರುವ ರೈತರು, ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.

ನಾಳೆ(ಡಿ.14-ಸೋಮವಾರ) ದೇಶಾದ್ಯಂತ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟಿರುವ ರೈತ ಸಂಘಟನೆಗಳು, ಕೃಷಿ ಕಾನೂನು ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.

Edited By : Nirmala Aralikatti
PublicNext

PublicNext

13/12/2020 10:10 am

Cinque Terre

103.77 K

Cinque Terre

2

ಸಂಬಂಧಿತ ಸುದ್ದಿ