ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸಕಾರಿ ನೌಕರರಿಗೆ ಬಯೋಮೆಟ್ರಿಕ್ ಪುನರಾರಂಭ

ಬೆಂಗಳೂರು: ರಾಜ್ಯದ ಎಲ್ಲ ಇಲಾಖೆಗಳ ಸರ್ಕಾರಿ ನೌಕರರು ಇನ್ನು ಮುಂದೆ ಹಾಜರಾತಿಗೆ ಬಯೋಮೆಟ್ರಿಕ್ ನಮೂದಿಸುವುದು ಕಡ್ಡಾಯವಾಗಿದೆ.

ಕೊರೋನಾ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಮೇ 31ರಿಂದ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವಲ್ಲಿ ವಿನಾಯಿತಿ ನೀಡಲಾಗಿತ್ತು.

ಪ್ರಸ್ತುತ ಕೋವಿಡ್ -19 ಪ್ರಕರಣಗಳು ಮತ್ತು ಪಾಸಿಟೀವ್ ಪ್ರಕರಣಗಳ ಸಂಖ್ಯೆ ಬೆಂಗಳೂರು ಮತ್ತು ಬೆಂಗಳೂರಿನ ಹೊರಗೆ ಕಡಿಮೆಯಾಗುತ್ತಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರಾರಂಭಿಸಲಾಗಿದೆ. ಹಾಗೆಯೇ ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್‍ಗಳ ವ್ಯವಸ್ಥೆ ಕಲ್ಪಿಸಲು ಅಧಿಕೃತ ಪ್ರಕಟಣೆ ತಿಳಿಸಲಾಗಿದೆ.

Edited By : Nagaraj Tulugeri
PublicNext

PublicNext

18/11/2020 08:00 pm

Cinque Terre

35.96 K

Cinque Terre

1

ಸಂಬಂಧಿತ ಸುದ್ದಿ