ಹೊಸದಿಲ್ಲಿ : ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ದೋಣಿಮಲೈನ ರಾಷ್ಟ್ರೀಯ ಖನಿಜ ನಿಗಮಕ್ಕೆ (ಓಒಆಅ) ಕಬ್ಬಣದ ಅದಿರು ಗಣಿಗಾರಿಕೆ ಗುತ್ತಿಗೆಗೆ ಮಧ್ಯಂತರ ವ್ಯವಸ್ಥೆ ಅಡಿ ರಾಜ್ಯ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದ್ದು, ದೋಣಿಮಲೈ ಪ್ರದೇಶದ 597.54 ಹೆಕ್ಟೇರ್ ಪ್ರದೇಶದಲ್ಲಿ ಈ ಕೂಡಲೇ ಗಣಿಗಾರಿಕೆ ಆರಂಭವಾಗಲಿದೆ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ನನ್ನ ಮಧ್ಯೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೋಣಿಮಲೈ ಕಬ್ಬಿಣದ ಅದಿರು ಗಣಿಗಾರಿಕೆ ಕುರಿತು ಚರ್ಚೆ ನಡೆಸಲಾಗಿತ್ತು.
ಈ ಯೋಜನೆಯಿಂದ ಈ ಹಣಕಾಸಿನ ವರ್ಷದಲ್ಲಿಯೇ ರಾಜ್ಯಕ್ಕೆ ಸುಮಾರು 400 ಕೋಟಿ ಆದಾಯವಾಗುವ ನಿರೀಕ್ಷೆ ಇದೆ. ಒಟ್ಟಾರೆ ಎನ್.ಎಂ.ಡಿ.ಸಿ. ದೋಣಿಮಲೈನಲ್ಲಿ ಗಣಿಗಾರಿಕೆ ಪ್ರಾರಂ¨Àವಾಗುವುದರಿಂದ ರಾಜ್ಯಕ್ಕೆ ಪ್ರತಿವರ್ಷ 1100 ಕೋಟಿಯಷ್ಟು ಆದಾಯ ಬರಲಿದೆ. ಈ ಗಣಿಗಾರಿಕೆಯಿಂದ ಸಾವಿರಾರು ಜನರಿಗೆ ಉದ್ಯೋಗವಕಾಶ ಒದಗಲಿದ್ದು, ಸ್ಥಳೀಯವಾಗಿ ಮತ್ತು ಸುತ್ತಮುತ್ತಲಿನ ವಾಣಿಜ್ಯ ವಹಿವಾಟಿಗೆ ಪೂರಕವಾಗಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಹೆಮ್ಮೆ ಕೋಲಾರ ಚಿನ್ನದ ಗಣಿಗೆ ಶುಕ್ರದೆಸೆ ಆರಂಭವಾಗಲಿದೆ. 16 ವರ್ಷಗಳ ಹಿಂದೆ ನಾನಾ ಕಾರಣಗಳಿಂದ ತನ್ನ ಉತ್ಪಾದನೆಯನ್ನು ನಿಲ್ಲಿಸಿದ್ದ ಚಿನ್ನದ ಗಣಿ ಪುನರುಜ್ಜೀವನಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಈ ಗಣಿಯಲ್ಲಿ ಇನ್ನೂ ಚಿನ್ನದ ನಿಕ್ಷೇಪ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಗಣಿಗಾರಿಕೆ ಮತ್ತೆ ಆರಂಭವಾಗುದರಿಂದ `ಕನ್ನಡ ನಾಡು ಚಿನ್ನದ ಬೀಡು’ ಎಂಬುದು ಅಕ್ಷರಶಃ ಸತ್ಯವಾಗಲಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ.
PublicNext
02/12/2020 04:27 pm