ಬೆಂಗಳೂರು: ಭಾರತ್ ಬಂದ್ , ಕರ್ನಾಟಕ ಬಂದ್, ಈಗಾ ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ನಾಳೆ ಬಸ್ಸ್ ಬಂದ್.
ನಾಳೆಯ (ಗುರುವಾರ) ಬಂದ್ ನ ಬಿಸಿ ತುಸು ಜೋರಾಗಿರಲಿದೆ ಕಾರಣ ನಾಳೆ ಬಸ್ಸ್ ಗಳು ರೋಡಿಗಿಳಿಯುವುದು ಡೌಟ್.
ಏಕೆಂದರೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ, ಬೆಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ.
ಇದರಲ್ಲಿ ಸಾರಿಗೆ ಇಲಾಖೆಯ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಹೀಗಾಗಿ ಬಸ್ಸುಗಳ ರಸ್ತೆಗಳಿಯೋದು ಬಹುತೇಕ ಸಂದೇಹವಿದೆ.
ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಈಗ ಇಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.
ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳೂ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
PublicNext
09/12/2020 05:57 pm